ಬಾಂಗ್ಲಾ ನುಸುಳುಕೋರರ ವಿರುದ್ಧ ಎನ್ಐಎ ತನಿಖೆ ನಡೆಸಲಿ
Oct 24 2024, 12:31 AM ISTಬಾಂಗ್ಲಾ ನುಸುಳುಕೋರರ ವಿರುದ್ಧ ಎನ್.ಐ.ಎ. ತನಿಖೆ ನಡೆಸಲು ಹಾಗೂ ನಕಲಿ ಆಧಾರ್ ಕಾರ್ಡ್ ಮಾಡುತ್ತಿರುವವರ ಜಾಲದ ಕುರಿತು ಸನಿಖೆ ನಡೆಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ಡಿಸಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಕೆಲ ದಿನಗಳ ಹಿಂದೆ ಹಾಸನದ ಪೆನ್ಷನ್ ಮೊಹಲ್ಲಾ ಠಾಣೆ ವ್ಯಾಪ್ತಿಯಲ್ಲಿ ಗಾರೆ ಕೆಲಸದವರ ಸೋಗಿನಲ್ಲಿದ್ದ ಇಂತಹ ಮೂವರು ನುಸುಳುಕೋರರನ್ನು ಪೊಲೀಸರು ಬಂಧಿಸಿದ್ದು, ಮೂವರೂ ಪಶ್ಚಿಮ ಬಂಗಾಳ ವಿಳಾಸವಿರುವ ನಕಲಿ ಆಧಾರ್ ಕಾರ್ಡ್ಗಳನ್ನು ಹೊಂದಿದ್ದಾರೆ ಎನ್ನಲಾಗಿದೆ.