ಸಮುದಾಯಗಳ ಕ್ಷೇಮಾಭಿವೃದ್ಧಿಗೆ ಶ್ರಮಿಸಿದ್ದ ಕೆಂಪೇಗೌಡರು: ತಹಸೀಲ್ದಾರ್
Jun 28 2024, 12:57 AM IST ಕೆಂಪೇಗೌಡರು ಕೆಂಪನಂಜೇಗೌಡರ ಮಗನಾಗಿದ್ದು, ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿದ್ದವರು. ಕೆಂಪೇಗೌಡರು ನೂರಾರು ವರ್ಷಗಳ ಹಿಂದೆಯೇ ತಮ್ಮ ಕನಸಿನ ಬೆಂಗಳೂರನ್ನು ಕಟ್ಟಿ ಬೆಳೆಸಿದ್ದರು. ಬೆಂಗಳೂರು ನಗರ ಇಂದು ಭಾರತದಲ್ಲಿ ಮಾತ್ರವಲ್ಲದೇ ಜಾಗತಿಕ ಮಟ್ಟದಲ್ಲಿ ಮಾನ್ಯತೆ ಪಡೆದಿದೆ. ಎಲ್ಲ ಜಾತಿ, ಮತ, ಧರ್ಮ, ಪಂಥಗಳಿಗೆ ಸೇರಿದ ಜನರನ್ನು ಇದು ಒಳಗೊಂಡಿದೆ. ಇಂತಹ ಮಹಾನಗರವನ್ನು ಸ್ಥಾಪಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ.