ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ದರ್ಶನ್ ಗ್ಯಾಂಗ್ ನಾಲ್ವರು ಆರೋಪಿಗಳ ಸ್ಥಳ ಮಹಜರು ಭಾನುವಾರ ಚಿತ್ರದುರ್ಗದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ನಡೆಯಿತು.
ನಟ ದರ್ಶನ್ ಅಂಡ್ ಗ್ಯಾಂಗ್ ಅನ್ನು ಪುನಃ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಚಿತ್ರ ನಟ ದರ್ಶನ್ ಹಾಗೂ ಆತನ ಸಹಚರರು ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ದೈಹಿಕ ಹಲ್ಲೆ ಮಾತ್ರವಲ್ಲದೆ, ಆತನಿಗೆ ವಿದ್ಯುತ್ ಶಾಕ್ ಕೂಡ ನೀಡಿದ್ದರು ಎಂಬ ಆಘಾತಕಾರಿ ಸಂಗತಿ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.
ಚಿತ್ರ ನಟ ದರ್ಶನ್ ಸೇರಿದಂತೆ ಆರೋಪಿಗಳ ವಿಚಾರಣೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ನಡೆಯುತ್ತಿದೆ. ಆದರೆ ಠಾಣೆಯ ಸುತ್ತ ಶಾಮಿಯಾನ ಹಾಕಿ ಇಡೀ ಠಾಣೆಯ ಒಳಗೆ ಏನು ನಡೆಯುತ್ತಿದೆ ಎಂದು ಗೊತ್ತಾಗದಂತೆ ಮರೆಮಾಚಲಾಗಿದೆ. ಪೊಲೀಸರ ಈ ನಡೆ ಭಾರಿ ಚರ್ಚೆಗೆ ಗ್ರಾಸವಾಗಿದೆ.