ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಮೊದಲ ತಂಡದಲ್ಲಿ ಕಾಡಿನಿಂದ ನಾಡಿಗೆ ಆಗಮಿಸಿ ಮೈಸೂರು ಅರಮನೆ ಸೇರಿಕೊಂಡಿರುವ 9 ಆನೆಗಳ ತೂಕವನ್ನು ಸೋಮವಾರ ಪರೀಕ್ಷಿಸಲಾಯಿತು.
ದಸರಾ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಅದ್ಧೂರಿಯಾಗಿ ದಸರಾ ಮಾಡಲು ಮುಖ್ಯಮಂತ್ರಿ ಸೂಚಿಸಿದ್ದಾರೆ. ಅದರಂತೆ ದಸರಾ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ತಿಳಿಸಿದರು.