ಕಾಂಗ್ರೆಸ್ ಮುಖಂಡ ಬಿಲಗುಂದಿ ಮನೆ ಮೇಲೆ ಇಡಿ ದಾಳಿ
May 01 2025, 12:47 AM ISTಇಲ್ಲಿನ ಹೈದರಾಬಾದ್ ಶಿಕ್ಷಣ ಸಂಸ್ಥೆಯ (ಎಚ್ಕೆಇ) ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ (ಎಂಆರ್ಎಂಸಿ) ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಸ್ಟೈಫಂಡ್ ದುರ್ಬಳಕೆ ಆರೋಪದಡಿ ಎಚ್ಕೆಇ ಸೊಸೈಟಿಯ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಭೀಮಾಶಂಕರ ಬಿಲಗುಂದಿ ಅವರ ರಿಂಗ್ ರಸ್ತೆಯಲ್ಲಿರುವ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡ ದಾಳಿ ಮಾಡಿದೆ.