ಲೋಕಾಯುಕ್ತ ನ್ಯಾ.ಬಿ.ಎಸ್.ಪಾಟೀಲ್ ಮತ್ತು ಉಪಲೋಕಾಯುಕ್ತರಾದ ನ್ಯಾ.ಕೆ.ಎನ್.ಫಣೀಂದ್ರ, ನ್ಯಾ.ಬಿ.ವೀರಪ್ಪ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು, ನ್ಯಾಯಾಂಗ ಅಧಿಕಾರಿಗಳು ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ 25 ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿದರು.
ನಿಷೇಧಿತ ಪಿಎಫ್ಐನ ರಾಜಕೀಯ ಮುಖವಾಣಿಯಾದ ಎಸ್ಡಿಪಿಐನ ಅಧ್ಯಕ್ಷ ಎಂ.ಕೆ.ಫೈಜಿ ಬಂಧನದ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬೆಂಗಳೂರು ಸೇರಿದಂತೆ ದೇಶಾದ್ಯಂತ ಎಸ್ಡಿಪಿಐಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಪೊಲೀಸರು ಆದಾಯಕ್ಕಿಂತ ಹೆಚ್ಚಿನ ಆದಾಯ ಗಳಿಕೆ ಆರೋಪದ ಮೇಲೆ ಎಂಟು ಭ್ರಷ್ಟ ಅಧಿಕಾರಿಗಳಿಗೆ ಸೇರಿದ ಸ್ಥಳಗಳ ಮೇಲೆ ದಾಳಿ ನಡೆಸಿ 64.78 ಲಕ್ಷ ರು. ನಗದು, 3.73 ಕೋಟಿ ರು. ಮೌಲ್ಯದ ಚಿನ್ನಾಭರಣ ಸೇರಿ 36.53 ಕೋಟಿ ರು. ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ.