ಅಕ್ರಮ ಕಸಾಯಿಖಾನೆಗೆ ಮೇಯರ್ ದಾಳಿ, ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ
Feb 08 2025, 12:30 AM ISTಕುದ್ರೋಳಿಯಲ್ಲಿ ನಾಲ್ಕು ವರ್ಷಗಳ ಹಿಂದೆ ಕಸಾಯಿಖಾನೆಯನ್ನು ಸ್ಥಗಿತಗೊಳಿಸಲಾಗಿದ್ದರೂ ಪಕ್ಕದ ಖಾಸಗಿ ಜಾಗದಲ್ಲಿ ಅನಧಿಕೃತವಾಗಿ ಕಸಾಯಿಖಾನೆ ಕಾರ್ಯಾಚರಿಸುತ್ತಿದ್ದುದು ಶುಕ್ರವಾರ ಪತ್ತೆಯಾಗಿದೆ. ಈ ಬಗ್ಗೆ ದೂರಿನ ಮೇರೆಗೆ ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಕೋಡಿಕಲ್ ನೇತೃತ್ವದ ತಂಡ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದೆ. ಈ ವೇಳೆ ವಧೆಗಾಗಿ ಕಟ್ಟಿಹಾಕಿದ್ದ ಆಡು, ಕುರಿಗಳು ಪತ್ತೆಯಾಗಿದೆ. ಅಲ್ಲದೆ ಅಲ್ಲಲ್ಲಿ ದನ, ಆಡು, ಕುರಿಗಳ ತಲೆಗಳ ರಾಶಿ, ತ್ಯಾಜ್ಯ ರಾಶಿ ಇದ್ದುದು ಕಂಡುಬಂದಿದೆ.