ಭೂಗತ ಲೋಕದ ಮಾಜಿ ದೊರೆ ಹಾಗೂ ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ ಮೇಲೆ ಶುಕ್ರವಾರ ರಾತ್ರಿ ಆಗಂತುಕರು ಎರಡು ಸುತ್ತು ಗುಂಡಿನ ದಾಳಿ ನಡೆಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಮುಂದುವರಿದಿದೆ. ಬಾಂಗ್ಲಾದ ದಿನಜಾಪುರದಲ್ಲಿ ಪ್ರಭಾವಿ ಹಿಂದೂ ನಾಯಕ ಭಾವೇಶ್ ಚಂದ್ರ ರಾಯ್ (58) ಅವರನ್ನು ಅಪಹರಿಸಿ ಭೀಕರವಾಗಿ ಗುರುವಾರ ಹತ್ಯೆ ಮಾಡಿದ ಘಟನೆ ಬಗ್ಗೆ ಭಾರತ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶೇ.245ರಷ್ಟು ಭಾರೀ ತೆರಿಗೆ ಹೇರಿದ ಬೆನ್ನಲ್ಲೇ ಚೀನಾ ಇದೀಗ ಭಾರತದತ್ತ ಸ್ನೇಹದ ಹಸ್ತ ಚಾಚಿದೆ. ಭಾರತದ ಪ್ರೀಮಿಯಂ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳಲು ತಾನು ಸಿದ್ಧ ಎಂದು ಚೀನಾ ಘೋಷಿಸಿದೆ.
ರಾಜ್ಯದಲ್ಲಿ ವನ್ಯಜೀವಿಗಳು ಕಾಡಂಚಿನ ಗ್ರಾಮಗಳಿಗೆ ದಾಳಿ ಮಾಡುವ ಪ್ರಕರಣ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು, 2023-24ಕ್ಕೆ ಹೋಲಿಸಿದರೆ 2024-25ರಲ್ಲಿ 15 ಸಾವಿರ ಪ್ರಕರಣಗಳು ಕಡಿಮೆಯಾಗಿವೆ.
‘ರಾಜ್ಯ ಸರ್ಕಾರವನ್ನು ಬೀಳಿಸಲು ಮೋದಿ ಹಾಗೂ ಅಮಿತ್ ಶಾ ಟೀಂ ಮುಂದಾಗಿದೆ. ಒಗ್ಗಟ್ಟಾಗಿದ್ದು, ಭಿನ್ನಾಭಿಪ್ರಾಯ ಬದಿಗೊತ್ತಿ, ಕುತಂತ್ರವನ್ನು ಎದುರಿಸಿ. ಕಿತ್ತಾಡಿಕೊಳ್ಳುತ್ತಿದ್ದರೆ ಸರ್ಕಾರವನ್ನು ಮುಗಿಸುತ್ತಾರೆ, ಹುಷಾರಾಗಿರಿ ಮಲ್ಲಿಕಾರ್ಜುನ ಖರ್ಗೆ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾರೆ.