ಕಾಫಿ ಎಸ್ಟೇಟ್ ಕಾರ್ಮಿಕರ ಮೇಲೆ ಕಾಡಾನೆ ದಾಳಿ
Dec 17 2024, 12:45 AM ISTಕಾಫಿ ಕೊಯ್ಲಿನ ಕೆಲಸ ಮಾಡುತ್ತಿರುವಾಗ ಒಂಟಿ ಕಾಡಾನೆ ದಾಳಿ ನಡೆಸಿದ ಪರಿಣಾಮ ಶಬಾನ (45 ವರ್ಷ) ಎಂಬುವವರಿಗೆ ಕಾಲಿಗೆ ಹಾಗೂ ಜಯಂತಿ(47 ವರ್ಷ) ಎಂಬುವವರಿಗೆ ಬೆನ್ನಿಗೆ ತೀವ್ರ ಗಾಯಗಳಾಗಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಲೂಕಿನ ಅರೇಹಳ್ಳಿ ಭಾಗದಲ್ಲಿ ಕಾಡಾನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳೆ ಹಾನಿ ಜೊತೆಗೆ ಮಾನವರ ಮೇಲೂ ದಾಳಿ ನಡೆಸುತ್ತಿರುವುದು ಹೆಚ್ಚಳವಾಗುತ್ತಿದೆ.