ಇಸ್ರೇಲ್ ಮತ್ತು ಹಮಾಸ್ ನಡುವಣ ಯುದ್ಧದ ವೇಳೆ ಪರೋಕ್ಷವಾಗಿ ಹಮಾಸ್ ಉಗ್ರರಿಗೆ ನೆರವು ನೀಡುತ್ತಿರುವ ಲೆಬನಾನ್ನ ಹಿಜ್ಬುಲ್ಲಾ ಉಗ್ರರ ಮೇಲೆ ಇಸ್ರೇಲಿ ಪಡೆಗಳು ಭಾನುವಾರ 100 ವಿಮಾನ ಬಳಸಿ ಭಾರೀ ಪ್ರಮಾಣದ ವೈಮಾನಿಕ ದಾಳಿ ನಡೆಸಿ ಕ್ಷಿಪಣಿಗಳ ಮಳೆ ಸುರಿಸಿದೆ.