ದಾಳಿ: ಅನಧಿಕೃತ ಎರಡು ಕ್ಲಿನಿಕ್ಗಳು ಸೀಜ್
Jun 28 2024, 12:57 AM ISTಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು: ನಕಲಿ ವೈದ್ಯರ ವಿರುದ್ಧ ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಮುಂದುವರಿದಿದ್ದು, ಚನ್ನಮ್ಮನ ಕಿತ್ತೂರಿನಲ್ಲಿ ಮತ್ತಿಬ್ಬರು ನಕಲಿ ವೈದ್ಯರನ್ನು ಪತ್ತೆ ಮಾಡಿದ್ದಾರೆ. ಅಲ್ಲದೇ, ದಾಳಿ ನಡೆಸಿ ಕ್ಲಿನಿಕ್ಗಳನ್ನು ಸೀಜ್ ಮಾಡಿದ್ದಾರೆ. ತಾಲೂಕಾ ವೈದ್ಯಾಧಿಕಾರಿ ಎಸ್.ಎಸ್.ಸಿದ್ದಣ್ಣವರ ನೇತೃತ್ವದಲ್ಲಿ 2 ಕ್ಲಿನಿಕ್ಗಳ ಮೇಲೆ ಬುಧವಾರ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.