ದೇವನಗೂಲ್ ಗ್ರಾಮದಲ್ಲಿ ಕಾಡಾನೆ ದಾಳಿ: ಬಾಳೆ ಬೆಳೆ ನಾಶ
Apr 12 2024, 01:03 AM ISTದೇವನಗೂಲ್ ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಬಾಳೆ ಬೆಳೆ ನಾಶ ಮಾಡಿದೆ. ಒಂಟಿ ಸಲಗ ಕಳೆದ ಬಾರಿ ಚಾರ್ಮಾಡಿ ಭಾಗದಿಂದ ಬಂದು ದೇವನಗೂಲ್ ಗ್ರಾಮಕ್ಕೆ ಲಗ್ಗೆಯಿಟ್ಟು ವಾಸದ ಮನೆಯ ಹಿಂಭಾಗದಲ್ಲಿ ಬೈನೇಮರ, ಬಾಳೆ ಎಳೆದು ನಾಶ ಮಾಡಿತ್ತು. ಈ ಬಾರಿ ದೇವನಗೂಲ್ ಗ್ರಾಮದ ಗ್ರಾಮಸ್ಥರಾದ ಡಿ.ಟಿ.ಮಂಜುನಾಥ್ ಆಚಾರ್ಯ, ಎಂ.ವೀರಪ್ಪಗೌಡ ಎಂಬುವರ ಮನೆ ಬಳಿ ರಾತ್ರಿ ದಾಳಿ ಮಾಡಿ ಬೃಹತ್ ಬೈನೇಮರ ಹಾಗೂ ಸುತ್ತಮುತ್ತ ಇರುವ ಬಾಳೆ ಬೆಳೆ ನಾಶ ಮಾಡಿ ಸಾಗಿದೆ, ಇದರಿಂದ ಬೆಳೆ ನಾಶವಾಗಿ ನಷ್ಟ ಸಂಭವಿಸಿದೆ.