ಸರ್ಕಾರಿ ಕಾಲೇಜಿನ ಮೂವರು ಪಿಯು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ
Mar 05 2024, 01:31 AM ISTಆ್ಯಸಿಡ್ ಎರಚಿದ ಆರೋಪಿ, ಕೇರಳದ ಮಲಪುರಂ ಜಿಲ್ಲೆಯ ನೆಳಂಬೂರು ನಿವಾಸಿ ಎಂಬಿಎ ವಿದ್ಯಾರ್ಥಿ ಅಬೀನ್ (೨೩) ನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ. ಘಟನೆಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿರುವ ಮೂವರು ಸಹಪಾಠಿ ವಿದ್ಯಾರ್ಥಿನಿಯರಿಗೆ ಗಾಯವಾಗಿದೆ. ಓರ್ವ ವಿದ್ಯಾರ್ಥಿನಿಗೆ ಹೆಚ್ಚಿನ ಗಾಯವಾಗಿದೆ ಇನ್ನುಳಿದ ಇಬ್ಬರಿಗೆ ಸುಟ್ಟ ಗಾಯವಾಗಿದೆ ಎಂದು ತಿಳಿದುಬಂದಿದೆ