ಕೇಜ್ರಿವಾಲ್ ಸುಳ್ಳು ಭರವಸೆಗೆ ಬೇಸತ್ತು ಮತದಾರರು, ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿ, ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಮೂಲಕ 27 ವರ್ಷದ ನಂತರ ಬಿಜೆಪಿ ಪಕ್ಷಕ್ಕೆ ಆಡಳಿತದ ಚುಕ್ಕಾಣಿ ಹಿಡಿಯಲು ಅವಕಾಶ ಕಲ್ಪಿಸಿದ್ದಾರೆ.
27 ವರ್ಷಗಳ ಬಳಿಕ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ವಿಜಯಪತಾಕೆ ಹಾರಿಸಿರುವ ಬಿಜೆಪಿ, ಸರ್ಕಾರ ರಚನೆ ಮತ್ತು ತನ್ನ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿದೆ.
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಹರ್ಷ ವ್ಯಕ್ತಪಡಿಸಿದ್ದು, ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಬಣ್ಣ ಬಯಲಾಗಿದೆ ಎಂದು ಟೀಕಿಸಿದ್ದಾರೆ.