27ರಂದು ದೆಹಲಿ ರೈತರ ಹೋರಾಟ ಬೆಂಬಲಿಸಿ ಜಿಲ್ಲೆ ಬಂದ್
Feb 21 2024, 02:01 AM IST ದೆಹಲಿ ಗಡಿಯಲ್ಲಿ ಪಂಜಾಬ್ ಮತ್ತು ಹರಿಯಾಣ ರೈತರು ನಡೆಸುತ್ತಿರುವ ಅಹೋರಾತ್ರಿ ಹೋರಾಟವನ್ನು ಬೆಂಬಲಿಸಿ ಫೆ.27ರಂದು ಗ್ರಾಮ ಮತ್ತು ತಾಲೂಕು ಕೇಂದ್ರಗಳ ಬಂದ್ ಆಚರಿಸುವಂತೆ ರಾಜ್ಯ ರೈತ ಸಂಘ ಕರೆ ಕೊಟ್ಟಿದೆ. ಅದರಂತೆ ಈ ಬಂದ್ ದಿನ ಎಲ್ಲ ರೈತರು, ವಿವಿಧ ವ್ಯಾಪಾರ- ವಹಿವಾಟುದಾರರು, ವಿವಿಧ ಸಂಘ-ಸಂಸ್ಥೆಗಳು, ಮಹಿಳಾ ಸಂಘಟನೆಗಳು, ದಲಿತ ಕಾರ್ಮಿಕ ಸಂಘಟನೆಗಳು ಮತ್ತು ಲಾರಿ, ಟ್ಯಾಕ್ಸಿ, ಆಟೋ ಮಾಲೀಕರು, ಚಾಲಕರ ಸಂಸ್ಥೆಗಳು ಮತ್ತು ವಾಣಿಜ್ಯ ಸಂಸ್ಥೆಗಳ ಎಲ್ಲ ಮುಖ್ಯಸ್ಥರು ಬೆಂಬಲಿಸಿ, ಸಹಕರಿಸಬೇಕು ಎಂದು ರೈತ ನಾಯಕ ಕೆ.ಟಿ.ಗಂಗಾಧರ್ ಶಿವಮೊಗ್ಗದಲ್ಲಿ ಮನವಿ ಮಾಡಿದ್ದಾರೆ.