ದುಬೈನಿಂದ ನಗರಕ್ಕೆ ಚಿನ್ನ ಅಕ್ರಮ ಸಾಗಣೆ ಪ್ರಕರಣದಲ್ಲಿ ಜಾಮೀನು ಕೋರಿ ನಟಿ ರನ್ಯಾ ರಾವ್ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರಕ್ಕೆ ಮುಂದೂಡಿದೆ.
ನಟಿ ರನ್ಯಾ ರಾವ್ ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡುವ ವೇಳೆ ತನ್ನ ಸ್ನೇಹಿತ ಹಾಗೂ ಪಾಲುದಾರ ತರುಣ್ ರಾಜ್‌ನ ಅಮೆರಿಕ ಪಾಸ್‌ಪೋರ್ಟ್ ಬಳಸಿಕೊಂಡಿರುವುದು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
‘ನನ್ನ ಕೊನೆಯ ಉಸಿರು ಇರೋವರೆಗೂ ದರ್ಶನ್ ನನ್ನ ಮಗನೇ. ನಾನು ಇನ್‌ಸ್ಟಾಗ್ರಾಮ್‌ನಲ್ಲಿ ಮಾಡಿರುವ ಪೋಸ್ಟ್‌ಗೂ, ದರ್ಶನ್ ಅವರಿಗೂ ಯಾವುದೇ ಸಂಬಂಧ ಇಲ್ಲ. ಇಷ್ಟಕ್ಕೂ ನಾನು ದರ್ಶನ್ ಅವರನ್ನು ಗುರಿಯಾಗಿಸಿಕೊಂಡು ಯಾವುದೇ ಪೋಸ್ಟ್ ಮಾಡಿಲ್ಲ.’