• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ನದಿ ದಡದಲ್ಲಿ ತ್ಯಾಜ್ಯ ರಾಶಿ

May 31 2025, 12:24 AM IST
ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ತ್ಯಾಜ್ಯಗಳನೆಲ್ಲ ಹಲವಾರು ವರ್ಷಗಳಿಂದ ತಂದು ಇಲ್ಲಿ ಸುರಿಯಲಾಗುತ್ತಿದ್ದು, ಇಡೀ ವಾತಾವರಣ ಕಲುಷಿತವಾಗಿದೆ. ಇದರಿಂದ ಸಾಂಕ್ರಾಮಿಕ ರೋಗದ ಭೀತಿ ಜನರಲ್ಲಿ ಮೂಡಿದೆ.

ಕಾವೇರಿ ನದಿ ತೀರದ ಎರಡೂ ಬದಿ ಅಕ್ರಮ ಕಟ್ಟಡ ತೆರವುಗೊಳಿಸಿ: ನ್ಯಾ.ಬಿ.ವೀರಪ್ಪ

May 28 2025, 12:13 AM IST
ಕೆಲವರು ಕಾವೇರಿ ನದಿ ತೀರ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ರೆಸಾರ್ಟ್ ಸೇರಿದಂತೆ ಮೋಜು ಮಸ್ತಿ ತಾಣಗಳನ್ನಾಗಿ ನಿರ್ಮಿಸಿಕೊಂಡಿರುವ ಬಗ್ಗೆ ದೂರುಗಳು ಬಂದಿವೆ. ನದಿ ಒತ್ತುವರಿ ಮಾಡಿಕೊಂಡು ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿರುವವರ ವಿರುದ್ಧ ತ್ವರಿತವಾಗಿ ನೋಟಿಸ್ ಜಾರಿ ಮಾಡಿ.

ಕೊಡಗಿನಲ್ಲಿ ಮುಂದುವರೆದ ಮಳೆಯಬ್ಬರ : ನದಿ ತಟದಲ್ಲಿ ಪ್ರವಾಹ ಭೀತಿ

May 27 2025, 12:13 AM IST
ಜಿಲ್ಲೆಯಾದ್ಯಂತ ಸೋಮವಾರ ಮಧ್ಯಾಹ್ನದ ಬಳಿಕ ಮತ್ತೆ ಭಾರಿ ಮಳೆಯಾಗಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಹಾನಿಯಾಗಿದೆ.

ಕಾವೇರಿ ನದಿ ನೀರಿನ ಮಟ್ಟ ಏರಿಕೆ

May 26 2025, 11:59 PM IST
ಮಳೆ ಅರ್ಭಟದಿಂದ ಜನರು ಮನೆಯಿಂದ ಹೊರಹೋಗಲು ಹಿಂದೇಟು ಹಾಕುತ್ತಿದ್ದಾರೆ. ಪಟ್ಟಣದ ಸಂತೆಯಲ್ಲಿ ದಿನವಿಡೀ ಸುರಿದ ಮಳೆಗೆ ವ್ಯಾಪಾರಸ್ಥರು ಸಮಸ್ಯೆ ಅನುಭವಿಸುವಂತಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಕರು ತಮ್ಮ ಜಮೀನಿನಲ್ಲಿ ಬಿತ್ತನೆ ಹಾಗೂ ವ್ಯವಸಾಯ ಮಾಡಲು ಮಳೆ ಅಡ್ಡಿಯಾಗುತ್ತಿದೆ. ಕೆಲವು ರೈತರು ಸುರಿಯುವ ಮಳೆಯಲ್ಲಿಯೇ ಲೆಕ್ಕಿಸದೇ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದರು. ಈ ಭಾಗದಲ್ಲಿ ಹೆಚ್ಚು ಬೆಳೆಯುವ ತಂಬಾಕು ಮುಸುಕಿನ ಜೋಳ, ರಾಗಿ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ಮಳೆ ಜಲಾವೃತವಾಗಿದ್ದು, ಬೆಳೆಹಾನಿ ಭೀತಿ ಆವರಿಸಿದೆ‌. ಜಮೀನಿನಲ್ಲಿ ನಿತ್ತಿದ್ದ ನೀರು ಹೊರಕಳಿಸಲು ರೈತರು ಹರಸಾಹಸಪಡುವಂತಾಗಿದೆ.

ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ತಕ್ಕ ಶಾಸ್ತಿ: ಉಳ್ಳಾಯ ದೈವ ಅಭಯ

May 19 2025, 12:30 AM IST
ಖಂಡಿಗೆ ಚೇಳ್ಯಾರು ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ವಾರ್ಷಿಕ ಜಾತ್ರೆ ಸಂದರ್ಭ ಸಂಪ್ರದಾಯದಂತೆ ಮೀನು ಹಿಡಿಯುವ ಕಾರ್ಯಕ್ರಮ ನಡೆಯುತ್ತದೆ. ಪ್ರಸ್ತುತ ನಂದಿನಿ ನದಿಯಲ್ಲಿ ತ್ಯಾಜ್ಯ ನೀರು ಹರಿಯುವುದರ ಜೊತೆಗೆ ಕಳೆ ತುಂಬಿದ್ದರಿಂದ ಮೀನು ಹಿಡಿಯಲು ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ನದಿಯಲ್ಲಿ ಮೀನಿನ ಸಂತತಿ ಕೊರತೆ ಕಂಡು ಬಂದಿದ್ದು ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಸಂಪ್ರದಾಯ ಮಾಯವಾಗುವ ಆತಂಕವಿದೆ.

ಕೃಷ್ಣಾ ನದಿ ರಕ್ಷಣೆ ನಮ್ಮೆಲ್ಲ ಹೊಣೆ

May 14 2025, 01:52 AM IST
ಕನ್ನಡಪ್ರಭ ವಾರ್ತೆ ಆಲಮಟ್ಟಿ ಕೃಷ್ಣಾ ನದಿಯ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಎಂದು ಧಾರವಾಡ ವಾಲ್ಮಿಯ ಮಾಜಿ ನಿರ್ದೇಶಕ ಡಾ.ರಾಜೇಂದ್ರ ಪೋದ್ದಾರ ಹೇಳಿದರು. ಆಲಮಟ್ಟಿಯ ಪ್ರವಾಸಿ ಮಂದಿರದ ಉದ್ಯಾನವನದಲ್ಲಿ ಕೃಷ್ಣಾ ಜಲ ಕುಟುಂಬದವರು ಆಯೋಜಿಸಿದ್ದ ಕೃಷ್ಣಾ ಜಲ ಸದ್ಭಾವನಾ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೃಷ್ಣಾ ನದಿಯು ಮಹಾರಾಷ್ಟ್ರದ ಮಹಾಬಲೇಶ್ವರದಲ್ಲಿ ಉಗಮವಾಗಿ ಆಂಧ್ರದ ಹಂಸಾದೇವಿಯಲ್ಲಿ ಬಂಗಾಳಕೊಲ್ಲಿ ಮೂಲಕ ಸಮುದ್ರ ಸೇರುತ್ತದೆ. ಈ ನಾಲ್ಕು ರಾಜ್ಯದ ಜನರು ಸೇರಿ ಕೃಷ್ಣಾ ನದಿಯನ್ನು ಸಂರಕ್ಷಣೆ ಮಾಡಬೇಕು.

ನದಿ ಕಲುಷಿತಗೊಳ್ಳದಂತೆ ರಕ್ಷಣೆ ಮಾಡೋದು ಎಲ್ಲರ ಕರ್ತವ್ಯ

May 14 2025, 01:50 AM IST
ಕೂಡಲಸಂಗಮದ ಬಸವಣ್ಣನ ಐಕ್ಯ ಮಂಟಪ ಪ್ರವೇಶ ದ್ವಾರದ ಮುಂದೆ ಕೃಷ್ಣಾ ಜಲಯಾತ್ರೆ ಸಮಾರಂಭವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.

ಸದ್ದು ಮಾಡುತ್ತಿದೆ ನದಿ ಮರಳು ಗಣಿಗಾರಿಕೆ ಟೆಂಡರ್‌

May 12 2025, 12:07 AM IST
ಸರ್ಕಾರ ಹೇಮಾವತಿ ನದಿ ಮರಳು ಗಣಿಗಾರಿಕೆಗಾಗಿ ಕರೆದಿರುವ ಟೆಂಡರ್ ಪ್ರಕ್ರಿಯೆ ತಾಲೂಕಿನಲ್ಲಿ ಬಾರಿ ಸದ್ದು ಮಾಡುತ್ತಿದೆ. ೨೦೨೩ರ ಏಪ್ರಿಲ್‌ವರೆಗೆ ಇದ್ದ ಮರಳು ಗಣಿಗಾರಿಕೆ ಅವಧಿ ಮುಕ್ತಾಯದ ನಂತರದ ಎರಡು ವರ್ಷದವರಗೆ ಮರಳು ಗಣಿಗಾರಿಕೆಗೆ ಅವಕಾಶವಿಲ್ಲದ ಕಾರಣ ಜನರು ಅಭಿವೃದ್ಧಿ ಕಾಮಗಾರಿಗಾಗಿ ಮರಳು ದೊರೆಯದೆ ದುಪ್ಪಟ್ಟು ದುಡ್ಡು ಕೊಟ್ಟು ಮರಳುಗಳ್ಳರಿಂದ ಮರಳು ಪಡೆಯುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದರಿಂದಾಗಿ ತಾಲೂಕಿನಲ್ಲಿ ಮರಳು ಗಣಿಗಾರಿಕೆಗೆ ಅವಕಾಶ ನೀಡುವಂತೆ ಒತ್ತಾಯ ಕೇಳಿ ಬರುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ ಮರಳು ಗಣಿಗಾರಿಕೆಗೆ ಹೊಸ ವಿಧಾನದಲ್ಲಿ ಟೆಂಡರ್‌ಗೆ ಅವಕಾಶ ಮಾಡಿಕೊಟ್ಟಿದೆ.

ಸಿಂಧು ನದಿ ಒಪ್ಪಂದಕ್ಕೆ ತಡೆ ರದ್ದಿಲ್ಲ - ಪಾಕ್‌ ಉಗ್ರವಾದ ನಿಲ್ಲಿಸುವವರೆಗೆ ಮುಂದುವರಿಕೆ

May 11 2025, 05:36 AM IST

ಸಿಂಧೂ ನದಿ ನೀರು ಒಪ್ಪಂದವನ್ನು ಸ್ಥಗಿತಗೊಳಿಸುವುದು ಸೇರಿದಂತೆ ಪಾಕಿಸ್ತಾನದ ವಿರುದ್ಧ ಭಾರತ ತೆಗೆದುಕೊಂಡ ದಂಡನಾತ್ಮಕ ಕ್ರಮಗಳು ಹಾಗೆಯೇ ಜಾರಿಯಲ್ಲಿರುತ್ತವೆ ಎಂದು ಸರ್ಕಾರಿ ಮೂಲಗಳು ಶನಿವಾರ ತಿಳಿಸಿವೆ.

ಅರ್ಧಕ್ಕೆ ನಿಂತ ರಾಮನಾಥಪುರದ ಕಾವೇರಿ ನದಿ ಸೇತುವೆ ಕಾಮಗಾರಿ

May 09 2025, 12:31 AM IST
ಮೈಸೂರು ಅರಸರ ಕಾಲದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆಯ ಸೇತುವೆ ಶತಮಾನ ಪೂರೈಸಿದೆ. ಹಳೆಯ ಸೇತುವೆ ಕಿರಿದಾಗಿದ್ದು, ಶಿಥಿಲಾವಸ್ಥೆಗೆ ತಲುಪಿದ ಕಾರಣ ಕಳೆದ 2017ರಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಹಾಗೂ ಶಾಸಕ ಎ. ಮಂಜು ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ವೇಳೆ ಹೊಸ ಸೇತುವೆ ನಿರ್ಮಾಣಕ್ಕಾಗಿ ಸರ್ಕಾರ 24 ಕೋಟಿ ರು. ವೆಚ್ಚದ ಅನುದಾನ ಬಿಡುಗಡೆ ಮಾಡಿತ್ತು. ದುರಾದೃಷ್ಟವಶಾತ್ ದೇವರು ಕೊಟ್ಟರೂ ಪೂಜಾರಿ ವರ ಕೊಡಲ್ಲ ಎನ್ನುವ ಗಾದೆ ಮಾತಿನಂತೆ ಸರ್ಕಾರ ದೊಡ್ಡ ಮೊತ್ತದ ಅನುದಾನ ನೀಡಿದರೂ ಕಾಮಗಾರಿ ಮುಗಿಯದೆ ನನೆಗುದಿಗೆ ಬಿದ್ದಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 27
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved