ನಾಯಿ ಕಚ್ಚಿದರೂ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಔಷಧಿ ಇಲ್ಲ
Jul 10 2025, 12:45 AM ISTಜಿಲ್ಲೆಯಲ್ಲಿ ಹೃದಯಾಘಾತ ಹೆಚ್ಚಿದೆ, ನಾಯಿ ಕಡಿತಕ್ಕೆ ಆಸ್ಪತ್ರೆಯಲ್ಲಿ ಸರಿಯಾದ ಔಷಧ ಇಲ್ಲ. ಮೆಕ್ಕೆ ಜೋಳಕ್ಕೆ ಬಿಳಿಸುಳಿ ರೋಗದಿಂದ ರೈತರು ನಷ್ಟಕ್ಕೀಡಾಗಿದ್ದಾರೆ ಎನ್ನುವುದು ಸೇರಿದಂತೆ ಪ್ರಮುಖ ವಿಚಾರಗಳ ಕುರಿತು ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಅವರು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸಲಹೆ ನೀಡಿ ಕ್ರಮಕ್ಕೆ ಸೂಚನೆ ನೀಡಿದರು. ಹಾಸನ ನಗರದಲ್ಲಿ ನಾಯಿ ಕಡಿತ ಪ್ರಕರಣ ಹೆಚ್ಚಾಗಿದ್ದು, ನಾಯಿ ಕಡಿತಕ್ಕೆ ವ್ಯಾಕ್ಸಿನ್ ಕೂಡ ಸರಕಾರದಿಂದ ಸರಬರಾಜು ಆಗುತ್ತಿಲ್ಲ. ಶಾಸಕರು ಸದನದಲ್ಲಿ ಗಮನ ಸೆಳೆಯಬೇಕಾಗಿದೆ. ವಾಕ್ ಮಾಡುವವರ ಮೇಲೂ ಬೀದಿ ನಾಯಿಗಳು ದಾಳಿ ಮಾಡುತ್ತಿರುವುದು ಕಂಡುಬಂದಿದೆ ಎಂದು ತಿಳಿಸಿದರು.