ಕೆರೆಗಳಿಗೆ ಏತ ನೀರಾವರಿ ಮೂಲಕ ನೀರು ಹಾಯಿಸಿ
Feb 21 2025, 12:49 AM ISTಶಿಕಾರಿಪುರ: ತಾಲೂಕಿನ ಎಲ್ಲ ಹೋಬಳಿಗೆ ಏತ ನೀರಾವರಿ ಯೋಜನೆ ಜಾರಿಗೊಳಿಸಲಾಗಿದ್ದು, ಕೂಡಲೇ ತಾಳಗುಂದ, ಉಡಗಣಿ, ಹೊಸೂರು, ಕಸಬಾ ಹೋಬಳಿಯ ಕೆರೆಗಳಿಗೆ ನೀರನ್ನು ತುಂಬಿಸಿದಲ್ಲಿ ಮಾತ್ರ ಬೇಸಿಗೆಯಲ್ಲಿ ಕೊಳವೆ ಬಾವಿಗಳು ಅಂತರ್ಜಲದಿಂದ ಸಮೃದ್ಧವಾಗಲಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಈ ಬಗ್ಗೆ ತುರ್ತಾಗಿ ಗಮನಹರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಗೌರವಾಧ್ಯಕ್ಷ ಪ್ಯಾಟಿ ಈರಣ್ಣ ತಿಳಿಸಿದರು.