ಶಿರಪೂರ ನೀರಾವರಿ ಹೆಸರಿನಲ್ಲಿ ಅವ್ಯವಹಾರ
May 17 2025, 01:20 AM ISTಕಲಬುರಗಿ: ಜಿಲ್ಲೆಯ ಆಳಂದ ತಾಲೂಕಿನ ವಿವಿಧ ಗ್ರಾಮಗಳಾದ ಸರಸಂಬಾ, ನಾಗಲೇಗಾಂವ, ಸಕ್ಕರಗಾ, ಅಂಬೇವಾಡ, ಕಿಣಿ ಅಬ್ಬಾಸ, ಚಿಂಚೋಳಿ (ಕೆ), ಚಿಂಚೋಳಿ (ಬಿ) ಮತ್ತು ಸಾವಳೇಶ್ವರ ಗ್ರಾಮಗಳಲ್ಲಿ ಶಿರಪೂರ ಮಾದರಿಯ ನಾಲಾ ಹೂಳೆತ್ತುವುದು ಮತ್ತು ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿಗಳಲ್ಲಿ ಭಾರಿ ಅವ್ಯವಹಾರ ನಡೆಯುತ್ತಿದ್ದು ಗುತ್ತಿಗೆದಾರರು ಮತ್ತು ಎಂಜಿನಿಯರರು ಸೇರಿಕೊಂಡು 20 ಕೋಟಿ ರು. ಲೂಟಿ ಮಾಡುತ್ತಿರುವುದನ್ನು ಕೂಡಲೇ ತಡೆಹಿಡಿದು ಸರಕಾರದ ನಿಯಮಗಳ ಪ್ರಕಾರ ತನಿಖೆ ಮಾಡುವಂತೆ ಮಾಜಿ ಶಾಸಕ ಸುಭಾಷ್ ಗುತ್ತೇದಾರ ಆಗ್ರಹಿಸಿದ್ದಾರೆ.