ಮಲ್ಲಿಪಟ್ಟಣ ಏತ ನೀರಾವರಿ ಯೋಜನೆ ಕಾಮಗಾರಿ ಚುರುಕು
Jan 22 2025, 12:32 AM ISTಸದನದಲ್ಲಿ ಸರ್ಕಾರದ ಗಮನ ಸೆಳೆದ ಹಿನ್ನೆಲೆಯಲ್ಲಿ ನೆನಗುದಿಗೆ ಬಿದ್ದಿದ್ದ ಮಲ್ಲಿಪಟ್ಟಣ ಏತ ನೀರಾವರಿ ಯೋಜನೆಯ ಕಾಮಗಾರಿ ಚುರುಕುಗೊಂಡಿದ್ದು, ಮೂರು ತಿಂಗಳಲ್ಲಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಎ. ಮಂಜು ತಿಳಿಸಿದರು. ಕೊಣನೂರು ಹೋಬಳಿಯ ಕೆಸವತ್ತೂರು ಗ್ರಾಮದ ಬಳಿಯಿಂದ 70 ಕೋಟಿ ರು. ವೆಚ್ಚದಲ್ಲಿ ಎರಡನೇ ಹಂತದ ಕಾಮಗಾರಿ ಪ್ರಾರಂಭವಾಗಲಿದ್ದು, 80 ಕಿ.ಮೀ. ವ್ಯಾಪ್ತಿಯ 53 ಕೆರೆ ಮತ್ತು 30 ಕಟ್ಟೆಗಳಿಗೆ ನೀರು ಹರಿಯಲಿದೆ. ಎರಡನೇ ಹಂತದ ಕಾಮಗಾರಿಯ ಪ್ರಸ್ತಾವನೆಯ ಅನುಮೋದನೆಗಾಗಿ ಕಾವೇರಿ ನೀರಾವರಿ ನಿಗಮದ ಬೋರ್ಡ್ ಸಭೆಯಲ್ಲಿ ಮಂಡನೆ ಮಾಡಲಾಗಿದೆ.