4-5 ವರ್ಷಗಲ್ಲಿ ಇಡೀ ಜಿಲ್ಲೆಯೇ ನೀರಾವರಿ ಪ್ಲಾನ್
Dec 23 2024, 01:01 AM ISTಕನ್ನಡಪ್ರಭ ವಾರ್ತೆ ಕೊಲ್ಹಾರ: ಬೆಳಗಾವಿ ಅಧಿವೇಶನದಲ್ಲಿ ಈ ಭಾಗದ ಜನಪ್ರತಿನಿಧಿಗಳು ಸಿಎಂ ಮತ್ತು ಡಿಸಿಎಂ ಬಳಿ ಮನವಿ ಮಾಡಿಕೊಂಡಿದ್ದೇವೆ. ಆಲಮಟ್ಟಿಯ ನೀರು ನೆರೆಯ ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗೆ ಹೋಗುತ್ತಿದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಅಗತ್ಯವಿರುವ ಇನ್ನಷ್ಟು ಭೂ ಸ್ವಾಧೀನ ಮಾಡಿಕೊಂಡು ನಮ್ಮ ಜಿಲ್ಲೆಗೆ 80 ಟಿಎಂಸಿ ನೀರು ಕೊಡಬೇಕು ಎಂದು ಮನವಿ ಮಾಡಿದ್ದೇವೆ ಎಂದು ಸಕ್ಕರೆ, ಜವಳಿ ಸಚಿವ ಶಿವಾನಂದ ಪಾಟೀಲ ಹೇಳಿದರು.