ಅಮೃತ ಸ್ವರೂಪ ನೀರು ಜೀವ ಸಂಕುಲಕ್ಕೆ ಆಧಾರ : ಸಿ. ನಾರಾಯಣ ಗೌಡ
Mar 23 2024, 01:11 AM ISTಜಲವಿಲ್ಲದ ಜಾಗವಿಲ್ಲ. ಜೀವ ಜಲವಾಗಿರುವ ನೀರು ಪ್ರಕೃತಿಯು ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳಿಗೆ ಇತ್ತ ವರ. ಇದು ಸೃಷ್ಟಿಸಲಾದ ನೈಸರ್ಗಿಕ ಸಂಪತ್ತು. ನೀರಿಗೆ ನೀರೇ ಪರ್ಯಾಯ. ಮಳೆ ಇದಕ್ಕೆ ಮೂಲಾಧಾರ. ನೀರಿನ ಮಹತ್ವ ಮೂಡಿಸಬೇಕಾದದ್ದು ಹೋಟೆಲ್ ಗಳ ಹೊಣೆಗಾರಿಕೆಯೂ ಹೌದು, ದರ ಪಟ್ಟಿಯನ್ನು ಪ್ರಕಟಿಸಿದಂತೆ ನೀರಿನ ಮಹತ್ವ ಬಗೆ ಹರಿವು ಮೂಡಿಸುವತ್ತ ಹೋಟೆಲ್ ಗಳು ಹೆಜ್ಜೆ ಇಡಬೇಕಾಗಿದೆ,