ಕೊನೇ ಭಾಗದ ಜಮೀನುಗಳಿಗೆ ನೀರು ಹರಿಸುವಂತೆ ಒತ್ತಾಯ
Jan 31 2025, 12:48 AM ISTಅಣೆಕಟ್ಟೆಯಿಂದ ಕಳೆದ ಜ.10ರಿಂದ ವಿಸಿ ನಾಲಾ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಹರಿದಿದೆ. ಆದರೆ, ಕೆರಗೋಡು ನೀರಾವರಿ ಭಾಗದ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ತಾಲೂಕಿನ ಗುಡಿದೊಡ್ಡಿ, ಮರಳಿಗ, ಪಣ್ಣೆದೊಡ್ಡಿ, ಮಹರ್ನಮಿದೊಡ್ಡಿ, ನಾಗನದೊಡ್ಡಿ, ಈರೇಗೌಡನ ದೊಡ್ಡಿ, ಆನೆದೊಡ್ಡಿ, ಮುದಿಗೆರೆ, ಹೊಸಕೆರೆ, ಕೊತ್ತನಹಳ್ಳಿ ಗ್ರಾಮಗಳ ಸುಮಾರು ನೂರಾರು ಎಕರೆ ಪ್ರದೇಶಗಳಿಗೆ ನೀರು ತಲುಪಿಲ್ಲ.