ಜ.5ರಿಂದಲೇ ಬೇಸಿಗೆ ಬೆಳೆಗೆ ಭದ್ರಾ ನೀರು ಹರಿಸಿ
Jan 02 2025, 12:33 AM ISTಬೇಸಿಗೆ ಬೆಳೆಗೆ ಭದ್ರಾ ಅಣೆಕಟ್ಟೆಯಿಂದ ಭದ್ರಾ ನಾಲೆಗಳಿಗೆ ಜ.5ರಂದಲೇ ನೀರು ಹರಿಸುವಂತೆ ಜಿಲ್ಲಾ ರೈತರ ಒಕ್ಕೂಟದಿಂದ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿ ಜಿಲ್ಲಾಡಳಿತ ಮೂಲಕ ಮನವಿ ಅರ್ಪಿಸಲಾಯಿತು. ನಗರದ ಜಿಲ್ಲಾಡಳಿತ ಭವನದಲ್ಲಿ ಬುಧವಾರ ಜಿಲ್ಲಾಧಿಕಾರಿ ಅವರನ್ನು ಭೇಟಿಯಾದ ನಿಯೋಗದ ಪದಾಧಿಕಾರಿಗಳು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.