ರಸ್ತೆಯಲ್ಲಿಯೇ ಹರಿಯುತ್ತಿರುವ ಚರಂಡಿ ನೀರು, ಕಣ್ಮುಚ್ಚಿ ಕುಳಿತ ಪುರಸಭೆ
Jul 21 2025, 12:00 AM ISTಪಟ್ಟಣದ 17ನೇ ವಾರ್ಡಿನ ಸ್ವಾಮಿ ವಿವೇಕಾನಂದ ನಗರದಲ್ಲಿರುವ ಸರ್ಕಾರಿ ಪದವಿಪೂರ್ವ ಕಾಲೇಜಿನ ರಸ್ತೆ ಅಭಿವೃದ್ಧಿ ಕಂಡಿಲ್ಲ, ಚರಂಡಿ ಇಲ್ಲದೇ ಅಲ್ಲಿನ ನಿವಾಸಿಗಳು ನಿತ್ಯ ಬಳಕೆ ಮಾಡುವ ಎಲ್ಲ ನೀರು ರಸ್ತೆಯ ಮೇಲೆ ಹರಿಯುತ್ತಿದ್ದು, ಸೊಳ್ಳೆಗಳ ಉತ್ಪಾದನಾ ಕೇಂದ್ರವಾಗಿ ಮಾರ್ಪಟ್ಟಿದ್ದು, ಪುರಸಭೆ ಕಣ್ಮುಚ್ಚಿ ಕುಳಿತಿದ್ದು, ಅಲ್ಲಿನ ನಿವಾಸಿಗಳ ಗೋಳನ್ನು ಕೇಳುವವರು ಇಲ್ಲದಂತಾಗಿದೆ.