24 ಗಂಟೆಯಲ್ಲಿ 1,76,248 ಕ್ಯುಸೆಕ್ ನೀರು ಕೃಷ್ಣಾ ನದಿಗೆ
Jul 26 2024, 01:30 AM ISTಕೃಷ್ಣಾ ಜಲಾನಯನ ಪ್ರದೇಶದಲ್ಲಿ ದಿನಗಳೆದಂತೆ ಮಳೆಯ ಅಬ್ಬರ ಹೆಚ್ಚಾಗುತ್ತಿದೆ. ಇದರಿಂದ ಕೃಷ್ಣಾ ನದಿಯ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಗುರುವಾರದ ಮಾಹಿತಿ ಪ್ರಕಾರ ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜ್ನಿಂದ 153542 ಕ್ಯುಸೆಕ್, ದೂಧಗಂಗಾ ನದಿಯಿಂದ 25200 ಕ್ಯುಸೆಕ್, ರಾಜ್ಯದ ಗಡಿಯಲ್ಲಿರುವ ಕಲ್ಲೋಳ ಬ್ಯಾರೇಜಿನಿಂದ 1,88,742 ಕ್ಯುಸೆಕ್ ನೀರು ಹರಿದು ಬರುತ್ತಿದೆ. ಕಳೆದ 24 ಗಂಟೆಯಲ್ಲಿ 1,76,248 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಅದೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ. ಬುಧವಾರಕ್ಕಿಂತ ಸುಮಾರು 12394 ಕ್ಯುಸೆಕ್ ನೀರು ಹೆಚ್ಚಾಗಿ ಬರುತ್ತಿದೆ ಎಂದು ತಹಸೀಲ್ದಾರ್ ಸದಾಶಿವ ಮಕ್ಕೋಜಿ ತಿಳಿಸಿದ್ದಾರೆ.