ನೀರು ಬಿಡಬೇಕೆಂಬ ಸಮಿತಿ ಶಿಫಾರಸ್ಸಿಗೆ ರೈತರ ಆಕ್ರೋಶ
Jul 13 2024, 01:31 AM ISTಕಳೆದ ವರ್ಷ ಮುಂಗಾರು ಕೈ ಕೊಟ್ಟ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಎದುರಾಗಿ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಲಿಲ್ಲ, ರೈತರು ಬೆಳೆ ಬೆಳೆಯಲೂ ಸಾಧ್ಯವಾಗಲಿಲ್ಲ. ಈಗಲೂ ಸಹ ಮುಂಗಾರು ಹಂಗಾಮಿಗೆ ಬೆಳೆ ಹಾಕಿಲ್ಲ, ಇದ್ದ ನೀರನ್ನೆಲ್ಲಾ ತಮಿಳುನಾಡಿಗೆ ನಿರಂತರವಾಗಿ ಹರಿಸಲಾಯಿತು. ಇದೀಗ ಜಲಾಶಯಕ್ಕೆ ಸ್ವಲ್ಪ ಪ್ರಮಾಣದ ನೀರು ಹರಿದು ಬಂದಿದ್ದರೂ ಬೆಳೆ ಬೆಳೆಯುವುದಕ್ಕೆ ನೀರು ನೀಡಿಲ್ಲ. ಕೇವಲ ಕೆರೆ ಕಟ್ಟೆಗಳಿಗೆ ಮಾತ್ರ ನೀರನ್ನು ಹರಿಸಲಾಗುತ್ತಿದೆ.