ನಿರುಪಯುಕ್ತ ವಸ್ತುಗಳಲ್ಲಿ ನೀರು ಇರದಂತೆ ಎಚ್ಚರ ವಹಿಸಿ: ಹಿರಿಯ ಆರೋಗ್ಯ ಅಧಿಕಾರಿ ರಾಮ ಪ್ರಸಾದ್
May 30 2024, 12:45 AM ISTನಿರುಪಯುಕ್ತ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ಗ್ರಾಮದ ಪ್ರತಿಯೊಬ್ಬ ವ್ಯಕ್ತಿಯೂ ಎಚ್ಚರ ವಹಿಸುವ ಜತೆಗೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಲ್ಲಿ ಡೆಂಘೀ ಸೇರಿದಂತೆ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಿಂದ ರಕ್ಷಣೆ ಪಡೆಯಬಹುದು ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಮ ಪ್ರಸಾದ್ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ನೈರ್ಮಲ್ಯ ಸಭೆ ಹಾಗೂ ಅರಿವಿನ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.