ಕಲುಷಿತ ನೀರು ಸೇವಿಸಿ 60ಕ್ಕು ಅಧಿಕ ಜನ ಅಸ್ವಸ್ಥ
Jul 29 2025, 01:52 AM ISTಕನ್ನಡಪ್ರಭವಾರ್ತೆ ಬಸವನಬಾಗೇವಾಡಿ  ಕಲುಷಿತ ನೀರು ಕುಡಿದು ಗ್ರಾಮದ ಸುಮಾರು 60ಕ್ಕೂ ಅಧಿಕ ಜನರು ಅಸ್ವಸ್ಥಗೊಂಡ ಘಟನೆ ನಿಡಗುಂದಿ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಶನಿವಾರ ನಡೆದಿದೆ. ಅಸ್ವಸ್ಥಗೊಂಡವರು ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಕೆಲವರು ಹತ್ತಿರದ ವಿವಿಧ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.ಗ್ರಾಮದ ಕೊಳವೆಬಾವಿ ನೀರು ಕುಡಿದಿದ್ದರಿಂದ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದುಬಂದಿದೆ.