27ರಿಂದ ಗಂಗೂಬಾಯಿ ವಿವಿ ಸಂಗೀತ, ನೃತ್ಯ ಪರೀಕ್ಷೆ
Jul 23 2024, 12:31 AM ISTಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾನಿಲಯದಿಂದ 2024ನೇ ಸಾಲಿನ ಸಂಗೀತ ಮತ್ತು ನೃತ್ಯ ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜುಲೈ 27ರಿಂದ ದಾವಣಗೆರೆ, ಚಿತ್ರದುರ್ಗ, ಹಾವೇರಿ ಜಿಲ್ಲೆಗಳನ್ನು ಒಳಗೊಂಡಂತೆ ದಾವಣಗೆರೆ ಮಹಾನಗರದಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಹತೀ ಸಂಗೀತ ಮಹಾ ವಿದ್ಯಾಲಯದ ಕಾರ್ಯದರ್ಶಿ ವಿದ್ವಾನ್ ಎಂ. ದ್ವಾರಕೀಶ ದಾವಣಗೆರೆಯಲ್ಲಿ ಹೇಳಿದ್ದಾರೆ.