ಇಂದು ಸಹಾಯಕ ಎಂಜಿನಿಯರ್‌ಗಳ ನೇಮಕಾತಿ ಪರೀಕ್ಷೆ
Aug 11 2024, 01:32 AM ISTಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಇಲಾಖೆಯಲ್ಲಿನ ಸಹಾಯಕ ಎಂಜಿನಿಯರ್‌ಗಳ ಸಿವಿಲ್ ಹುದ್ದೆಗಳ ನೇಮಕಾತಿಗಾಗಿ ಆ.11ರಂದು ನಗರದ 3 ಕೇಂದ್ರಗಳಲ್ಲಿ 1447 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗಾಗಲೇ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಸಿದ್ಧತೆ ಮಾಡಿಕೊಂಡಿದ್ದು, ಅಗತ್ಯ ಕಟ್ಟೆಚ್ಚರ ವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದರು.