ಎಸ್ಸೆಸ್ಸೆಲ್ಸಿ ಪರೀಕ್ಷೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
Jun 14 2024, 01:04 AM ISTಕೊಡಗು ಜಿಲ್ಲೆಯಲ್ಲಿ ಜೂ.14 ರಿಂದ ಜೂನ್, 22 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ-2 ನಡೆಯಲಿದೆ. ಪರೀಕ್ಷಾ ಕೇಂದ್ರಗಳಾದ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಎಂದು ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ.