ಪೊಲೀಸ್ ಇಲಾಖೆಯಿಂದ ರಸ್ತೆ ಸುರಕ್ಷತಾ ಜಾಗೃತಿ
Dec 11 2023, 01:15 AM ISTಪಟ್ಟಣದ ನೆಹರೂ ನಗರ ಪೊಲೀಸ್ ಠಾಣೆಯಲ್ಲಿ ಲೋಕೋಪಯೋಗಿ ಇಲಾಖೆ ಹಾಗೂ ಪೊಲೀಸ್ ಇಲಾಖೆ,ಕೆ ಎಸ್ ಆರ್ ಟಿ ಸಿ ವಾಹನ ಚಾಲಕರು ಮತ್ತು ಮಾಲೀಕರ ಸಂಘದ ವತಿಯಿಂದ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ನೀಡಿ ಮಾತನಾಡಿದ ವೃತ್ತ ನಿರೀಕ್ಷಕ ಶ್ರೀಕಾಂತ್, ಪೊಲೀಸ್ ಇಲಾಖೆ ನಿರ್ದೇಶನದಂತೆ ಸವಾರರು ರಸ್ತೆ ಸುರಕ್ಷತೆಯನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಈಗಾಗಲೇ ರಸ್ತೆ ಸುರಕ್ಷತೆಯ ಬಗ್ಗೆ ಹಾಗೂ ವಾಹನ ಸವಾರರ ಹಿತದೃಷ್ಟಿಯಿಂದ ಹತ್ತು ಹಲವಾರು ಜಾಗೃತಿ ಶಿಬಿರ ಮಾಡಿದರೂ ಅದು ಕೇವಲ ಜಾಗೃತಿಗೆ ಸೀಮಿತವಾಗುತ್ತಿರುವುದು ಬೇಸರದ ಸಂಗತಿ.