ಸಿ.ಟಿ.ರವಿ, ಹೆಬ್ಬಾಳಕರ ಪ್ರಕರಣ ಸಿಒಡಿಗೆ ಹಸ್ತಾಂತರ
Dec 25 2024, 12:49 AM ISTಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ ನಡುವಿನ ಆರೋಪ, ಪ್ರತ್ಯಾರೋಪ ತಾರಕಕ್ಕೇರಿದೆ. ಈ ನಡುವೆಯೇ ಸಿ.ಟಿ. ರವಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದಾಖಲಿಸಿದ್ದ ಪ್ರಕರಣ ಹಾಗೂ ಹೆಬ್ಬಾಳಕರ ಬೆಂಬಲಿಗರ ಮೇಲೆ ದಾಖಲಾಗಿದ್ದ ಎರಡೂ ಪ್ರಕರಣಗಳನ್ನು ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ಸಿಐಡಿಗೆ ಹಸ್ತಾಂತರ ಮಾಡಿದ್ದಾರೆ.