ಕಳಪೆ ಗುಣಮಟ್ಟದ ಔಷಧ ಬಳಕೆಯಿಂದಾಗಿಯೇ ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಸಂಭವಿಸಿದ್ದು, ಈ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸಬೇಕು. ಮೃತ ಬಾಣಂತಿಯರ ಕುಟುಂಬಕ್ಕೆ ಸರ್ಕಾರ ₹25 ಲಕ್ಷ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೋ ಪ್ರಕರಣ ದಾಖಲಿಸಿಕೊಂಡಿರುವ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಅವರು ಒಂದು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಆರೋಗ್ಯ ಇಲಾಖೆಗೆ ನಿರ್ದೇಶನ ನೀಡಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಹಾಗೂ ನಟಿ ಪವಿತ್ರಾಗೌಡ ಸೇರಿ ಇತರೆ ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಡಿ.3ಕ್ಕೆ ಮುಂದೂಡಿದೆ.
ಬೆಂಗಳೂರು ನಗರ ಜಿಲ್ಲೆಯ ಸಿವಿಲ್ ನ್ಯಾಯಾಲಯಗಳಲ್ಲಿ ಬಾಕಿಯಿರುವ ಸಿವಿಲ್ ಮತ್ತು ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಜಿಲ್ಲಾ ಕಾನೂನು ಸೇವೆಗಳ ಕಾನೂನು ಪ್ರಾಧಿಕಾರದ ವತಿಯಿಂದ ಇದೇ ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ