ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿರುವ ಅನುಮತಿ ರದ್ದುಪಡಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಶನಿವಾರಕ್ಕೆ (ಆ.31) ಮುಂದೂಡಿರುವ ಹೈಕೋರ್ಟ್
ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆಗೆ (ಸಿಬಿಐ) ಈ ಹಿಂದಿನ ಬಿಜೆಪಿ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದ ಕಾಂಗ್ರೆಸ್ ಸರ್ಕಾರದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ.
ಚಿತ್ರೀಕರಣದ ವೇಳೆ ನಟಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಕೇರಳದ ಸಿಪಿಎಂ ಪಕ್ಷದ ಶಾಸಕ ಹಾಗೂ ನಟ ಮುಕೇಶ್, ಜಯಸೂರ್ಯ, ಮಣಿಯನ್ಪಿಳ್ಳಾ ರಾಜು ಸೇರಿದಂತೆ ಹಲವರ ವಿರುದ್ಧ ಸ್ಥಳೀಯ ಪೊಲೀಸರು ಅತ್ಯಾಚಾರದ ಪ್ರಕರಣ ದಾಖಲಿಸಿದ್ದಾರೆ.
ನಟಿ ಪವಿತ್ರಾ ಗೌಡ ಹಾಗೂ ಅನುಕುಮಾರ್ ಜಾಮೀನು ಅರ್ಜಿಗಳ ತೀರ್ಪನ್ನು ಆ.31ರಂದು ಮತ್ತು ಕೇಶವಮೂರ್ತಿ ಹಾಗೂ ಪಟ್ಟಣಗೆರೆ ವಿನಯ್ ಅವರ ಜಾಮೀನು ಅರ್ಜಿಗಳ ತೀರ್ಪನ್ನು ಸೆ.2ರಂದು ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ ಕೋರ್ಟ್ ಪ್ರಕಟಿಸಲಿದೆ.
ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಆಗ್ನೇಯ ವಿಭಾಗದ ಪೊಲೀಸರು ಬುಧವಾರ ವಿಚಾರಣೆ ನಡೆಸಿದ್ದಾರೆ.