ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 14 ಮಂದಿ ವಿರುದ್ಧ ಕೊಲೆ ಮತ್ತು ಅಪಹರಣ ಹಾಗೂ ಇನ್ನು ಮೂವರ ಮೇಲೆ ಸಾಕ್ಷ್ಯ ನಾಶ ಆರೋಪ ದಾಖಲಿಸಲು ಪೊಲೀಸರು ಮುಂದಾಗಿದ್ದಾರೆ.
ಪಶ್ಚಿಮ ಬಂಗಾಳ ಮೂಲದ ಶರೀಫ್ ಉಲ್ ಇಸ್ಲಾಂ ಎಂಬಾತನಿಗೆ ಬೆಂಗಳೂರಿನ ಎನ್‌ಐಎ ವಿಶೇಷ ನ್ಯಾಯಾಲಯವು ನಕಲಿ ನೋಟು ಕಳ್ಳಸಾಗಣೆ ಪ್ರಕರಣದಲ್ಲಿ ಆರು ವರ್ಷಗಳ ಸರಳ ಕಾರಾಗೃಹ ಶಿಕ್ಷೆ ಮತ್ತು ₹5 ಸಾವಿರ ದಂಡ ವಿಧಿಸಿದೆ.
ರಾಜಧಾನಿಯಲ್ಲಿ ಡ್ರಂಕ್ ಆ್ಯಂಡ್ ಡ್ರೈವ್ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದ ನಗರ ಸಂಚಾರ ಪೊಲೀಸರು ಆಗಸ್ಟ್ ತಿಂಗಳಲ್ಲಿ 2,030 ಪಾನಮತ್ತ ಚಾಲಕರು/ಸವಾರರ ವಿರುದ್ಧ ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.