ಪ್ರಚೋದನಕಾರಿ ಹೇಳಿಕೆ: ಎಸ್‌ಡಿಪಿಐ ಮುಖಂಡದನ ವಿರುದ್ಧ ಪ್ರಕರಣ ದಾಖಲು
Jul 06 2025, 11:48 PM ISTಬ್ರಹ್ಮಾವರ ತಾಲೂಕಿನ ಕುಂಜಾಲು ಎಂಬಲ್ಲಿ ರಸ್ತೆ ಮಧ್ಯೆ ಗೋವಿನ ರುಂಡ ಪತ್ತೆಯಾಗಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ರಿಯಾಜ್ ಕಡಂಬು ವಿರುದ್ಧ ಉಡುಪಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಇದರೊಂದಿಗೆ ಈ ಪ್ರಕರಣಕ್ಕೆ ಸಂಬಂಧಿಸಿ ದಾಖಲಾದ ಪ್ರಕರಣಗಳ ಸಂಖ್ಯೆ ಮೂರಕ್ಕೇರಿದೆ.