ಸಿ.ಟಿ.ರವಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಲು ಆಗ್ರಹಿಸಿ ಮನವಿ
Feb 03 2024, 01:46 AM ISTಮುಧೋಳ: ರಾಷ್ಟ್ರಧ್ವಜವನ್ನು ತಾಲಿಬಾನಿ ಧ್ವಜಕ್ಕೆ ಹೋಲಿಸಿ ಅವಮಾನ ಮಾಡಿರುವ ಮಾಜಿ ಸಚಿವ ಸಿ.ಟಿ.ರವಿ ವಿರುದ್ಧ ದೇಶದ್ರೋಹ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಂಘಟನೆಗಳ ಒಕ್ಕೂಟದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಲಾಯಿತು. ಶುಕ್ರವಾರ ಪ್ರತಿಭಟನೆ ಮೂಲಕ ತಹಸೀಲ್ದಾರ್ ಕಚೇರಿ ಆಗಮಿಸಿದ ಪದಾಧಿಕಾರಿಗಳು, ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.