ಲೋಕ ಅದಾಲತ್ನಲ್ಲಿ ೧೪೫೯೨ ಪ್ರಕರಣ ಇತ್ಯರ್ಥ: ನ್ಯಾ.ರಾಮಾ ನಾಯಕ
Mar 10 2025, 12:16 AM ISTಕನ್ನಡಪ್ರಭ ವಾರ್ತೆ ವಿಜಯಪುರ ಕಕ್ಷಿದಾರರು ನ್ಯಾಯಾಲಯಗಳಿಗೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಅನಾವಶ್ಯಕ ವ್ಯರ್ಥವಾಗುವ ಹಣ ಹಾಗೂ ಸಮಯ ಉಳಿತಾಯವಾಗಲಿದೆ. ಅಲ್ಲದೇ, ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಮಾ ನಾಯಕ್ ಕರೆ ನೀಡಿದರು.