ಭ್ರೂಣ ಹತ್ಯೆ ಪ್ರಕರಣ: ಜಾಗೃತ ಅಧಿಕಾರಿಗಳ ತಂಡ ದಾಳಿ
Dec 09 2023, 01:15 AM ISTಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ತಾಲೂಕು ಜಾಗೃತ ದಳ ಅಧಿಕಾರಿಗಳ ತಂಡ ದಾಳಿ ನಡೆಸಿದ ವೇಳೆ ತಾಲೂಕಿನ ಬೆಳ್ಳೂರು ಪಟ್ಟಣದಲ್ಲಿ ದಾಖಲೆ ಸರಿಯಿಲ್ಲದ ಮತ್ತು ನಿಯಮಾನುಸಾರವಿಲ್ಲದೇ ನಡೆಸುತ್ತಿದ್ದ ಒಂದು ಖಾಸಗಿ ನರ್ಸಿಂಗ್ ಹೋಂ ಸೇರಿದಂತೆ ಕ್ಲಿನಿಕ್, ಮೆಡಿಕಲ್ ಸ್ಟೋರ್ ಮತ್ತು ರಕ್ತ ಪರೀಕ್ಷಾ ಕೇಂದ್ರಕ್ಕೆ ಬೀಗಮುದ್ರೆ ಹಾಕಿ ನೋಟಿಸ್ ಜಾರಿ ಮಾಡಿದ್ದಾರೆ.ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣದಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ, ಖಾಸಗಿ ಆಸ್ಪತ್ರೆಗಳು, ಮೆಡಿಕಲ್ ಸ್ಟೋರ್ಗಳು ಮತ್ತು ರಕ್ತ ಪರೀಕ್ಷಾ ಕೇಂದ್ರಗಳ ತಪಾಸಣೆಯನ್ನು ಚುರುಕುಗೊಳಿಸಿದ್ದಾರೆ.