ಇತ್ತೀಚಿನ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆಯೇ ಕಾರಣ. ಅವರ ಜನಪ್ರಿಯತೆಯೊಂದೇ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳನ್ನು ನೆಲಸಮಗೊಳಿಸಿತು ಎಂದು ಸಮೀಕ್ಷೆಯೊಂದು ಹೇಳಿದೆ.
ರಾಜ್ಯ ಬಿಜೆಪಿ ಭಿನ್ನಮತ ತಾರಕಕ್ಕೇರಿರುವ ನಡುವೆಯೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು.
ನೆಹರು ಬರೆದಿದ್ದ ಪತ್ರಗಳಲ್ಲಿನ ಅಂಶಗಳನ್ನು ಪ್ರಧಾನಿ ನರೇಂದ್ರ ಮೋದಿ ತಿರುಚಿದ್ದಾರೆ ಎಂದು ಆರೋಪಿಸಿರುವ ರಾಜ್ಯಸಭೆಯ ವಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಈ ವಿಷಯದಲ್ಲಿ ದೇಶವನ್ನು ದಿಕ್ಕು ತಪ್ಪಿಸಿದ್ದಕ್ಕಾಗಿ ಮೋದಿ ಕ್ಷಮೆ ಯಾಚಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ದೇಶದ ಕೊನೆಯ ವೈಸ್ರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಅವರ ಪತ್ನಿ ಎಡ್ವೀನಾಗೆ ಬರೆದ ಪತ್ರಗಳನ್ನು ಮರಳಿಸುವಂತೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ.
2012ರಲ್ಲಿ ಡಾ। ಮನಮೋಹನ ಸಿಂಗ್ ರಾಷ್ಟ್ರಪತಿಯನ್ನಾಗಿ ಮಾಡಬೇಕಿತ್ತು ಹಾಗೂ ಸಚಿವರಾಗಿದ್ದ ಪ್ರಣಬ್ ಮುಖರ್ಜಿ ಅವರನ್ನು ಪ್ರಧಾನಿ ಹುದ್ದೆಗೆ ಏರಿಸಬೇಕಿತ್ತು. ಹೀಗೆ ಮಾಡಿದ್ದರೆ 2014ರಲ್ಲಿ ಯುಪಿಎ-3 ಸರ್ಕಾರ ಖಂಡಿತ ಅಸ್ತಿತ್ವಕ್ಕೆ ಬರುತ್ತಿತ್ತು - ಮಣಿಶಂಕರ ಅಯ್ಯರ್ ಹೇಳಿದ್ದಾರೆ.
ವಕ್ಫ್ ಆಸ್ತಿ ಕಬಳಿಕೆ ಕುರಿತು ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 150 ಕೋಟಿ ರುಪಾಯಿ ಆಮಿಷವೊಡ್ಡಿದ್ದಾರೆಂದು ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಮಾಣಿಪ್ಪಾಡಿ ಮಾಡಿರುವ ಆರೋಪ ಸಂಬಂಧ ಪ್ರಧಾನಿ ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
‘ರಕ್ತದ ರುಚಿ ಕಂಡಿದ್ದ ಕಾಂಗ್ರೆಸ್ ಪದೇ ಪದೇ ಸಂವಿಧಾನಕ್ಕೆ ಹಾನಿ ಮಾಡಿತು. ಆದರೆ 2014ರಲ್ಲಿ ನಮ್ಮ ಸರ್ಕಾರ ಬಂದ ನಂತರ, ಭಾರತದ ಶಕ್ತಿ ಮತ್ತು ಏಕತೆಯನ್ನು ಹೆಚ್ಚಿಸುವ ಗುರಿಯೊಂದಿಗೆ ಸಂವಿಧಾನದ ದೃಷ್ಟಿಗೆ ಅನುಗುಣವಾಗಿ ನೀತಿ-ನಿರ್ಧಾರ ಕೈಗೊಂಡಿತು’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.