ರೈತ ನಾಯಕ ದಲ್ಲೆವಾಲ್ ರಕ್ಷಣೆಗೆ ಪ್ರಧಾನಿ, ರಾಷ್ಟ್ರಪತಿ ಮುಂದಾಗಲಿ
Jan 14 2025, 01:02 AM ISTಮಾರಕ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೈ ಬಿಡುವುದೂ ಸೇರಿದಂತೆ ದೆಹಲಿ ರೈತ ಹೋರಾಟದ ವೇಳೆ ಕೇಂದ್ರ ಸರ್ಕಾರ ನೀಡಿದ್ದ ಲಿಖಿತ ಭರವಸೆ ಈಡೇರಿಸಲು ಒತ್ತಾಯಿಸಿ ಶಂಭು ಗಡಿಯಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡ ಹಿರಿಯ ರೈತ ನಾಯಕ ಜಗಜಿತ್ ಸಿಂಗ್ ದಲೈವಾಲಾ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಹಿನ್ನೆಲೆ ತಕ್ಷಣ ದಲ್ಲೆವಾಲ್ ಅವರ ಪ್ರಾಣ ಉಳಿಸಲು ರಾಷ್ಟ್ರಪತಿ, ಪ್ರಧಾನಿ ಮಧ್ಯ ಪ್ರವೇಶಕ್ಕೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆಯ ನೇತೃತ್ವದಲ್ಲಿ ನಗರದಲ್ಲಿ ವಿವಿಧ ರೈತ, ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದವು.