ಕಳೆದ 10 ವರ್ಷಗಳಲ್ಲಿ ಭಾರತ ಹಲವು ಬದಲಾವಣೆಗಳನ್ನು ಕಂಡಿದೆ. ವಿಶ್ವದಲ್ಲೇ 4ನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿರುವ ದೇಶವಾಗಿ ಬೆಳೆದಿದೆ. ನಮ್ಮ ದೇಶದ ಆರ್ಥಿಕತೆಯು ಪ್ರಪಂಚದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ ಎಂದು ಬಿಜೆಪಿ ಮುಖಂಡ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಎನ್‌ಡಿಎ ಸರ್ಕಾರ ಮತ ಬ್ಯಾಂಕ್ ರಾಜಕಾರಣದಿಂದ ಸಾವಿರಾರು ಮೈಲು ದೂರದಲ್ಲಿದೆ. ‘ಜನರಿಂದ, ಜನರಿಗಾಗಿ, ಜನರಿಗೋಸ್ಕರ ಅಭಿವೃದ್ಧಿ’ ಎಂಬ ಮಂತ್ರದೊಂದಿಗೆ ನಮ್ಮ ಸರ್ಕಾರ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.