ಲಡಾಖ್ನಲ್ಲಿ ಚೀನಾ ಭಾರತದ 4000 ಚದರ ಕಿ.ಮೀ. ಪ್ರದೇಶವನ್ನು ಅತಿಕ್ರಮಿಸಿಕೊಂಡಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ವಿಷಯವನ್ನು ನಿಭಾಯಿಸುವಲ್ಲಿ ಪ್ರಧಾನಿ ಮೋದಿ ವಿಫಲರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಶಿವಲಿಂಗದ ಮೇಲಿನ ಚೇಳು ಇದ್ದಂತೆ ಎಂದು ಆರೆಸ್ಸೆಸ್ ನಾಯಕರೊಬ್ಬರು ಹೇಳಿದ್ದರು’ ಎಂದು 2018ರಲ್ಲಿ ಹೇಳಿ ವಿವಾದ ಎಬ್ಬಿಸಿದ್ದ ಕಾಂಗ್ರೆಸ್ ಮುಖಂಡ ಶಶಿ ತರೂರ್ ವಿರುದ್ಧದ ಮಾನಹಾನಿ ದಾವೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಪ್ರಧಾನಿ ಮೋದಿ ಅವರ ಬ್ರೂನೈ ಪ್ರವಾಸದಲ್ಲಿ ಇಂಡೋ-ಪೆಸಿಫಿಕ್ನಲ್ಲಿ ಚೀನಾದ ಆಕ್ರಮಣಕಾರಿ ನಡವಳಿಕೆಯನ್ನು ಟೀಕಿಸಿದ್ದಾರೆ. ಭಾರತವು 'ವಿಸ್ತರಣೆ'ಯನ್ನು ಬೆಂಬಲಿಸುವುದಿಲ್ಲ ಆದರೆ 'ಅಭಿವೃದ್ಧಿ'ಯನ್ನು ಬೆಂಬಲಿಸುತ್ತದೆ ಎಂದು ಹೇಳಿದರು.
ರಾಜಕೀಯ ಸಂಘಟನೆಗಳು ಆಂತರಿಕ ಪ್ರಜಾಪ್ರಭುತ್ವವನ್ನು ಅನುಸರಿಸದಿದ್ದರೆ ಏನಾಗುತ್ತದೆ ಎಂಬುದಕ್ಕೆ ಇಂದಿನ ಹಲವು ರಾಜಕೀಯ ಪಕ್ಷಗಳ ಸ್ಥಿತಿಯೇ ಸಾಕ್ಷಿ’ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮಹಿಳೆಯರ ವಿರುದ್ಧ ನಡೆಯುವ ಅಪರಾಧ ಪ್ರಕರಣಗಳಲ್ಲಿ ನ್ಯಾಯಾಂಗವು ತ್ವರಿತವಾಗಿ ತೀರ್ಪು ನೀಡಿದರೆ ಮಹಿಳೆಯರಲ್ಲಿ ಸುರಕ್ಷತಾ ಭಾವನೆ ಹೆಚ್ಚಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.