ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಣಾಳಿಕೆ ರವಾನೆ
Apr 26 2024, 12:46 AM ISTಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದಲ್ಲಿ ಚುನಾವಣೆ ಪ್ರಚಾರದಲ್ಲಿ ಕಾಂಗ್ರೆಸ್ಸಿನ ಪ್ರಣಾಳಿಕೆ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಈ ಅಂಶದಲ್ಲಿ ಯಾವುದೇ ರೀತಿಯ ಸತ್ಯತೆ ಇಲ್ಲ ಎಂದಿದ್ದಾರೆ. ಈ ಹಿನ್ನೆಲೆ ಜನರಿಗೆ ಕಾಂಗ್ರೆಸ್ ಬಗ್ಗೆ ತಪ್ಪು ಸಂದೇಶ ನೀಡೋದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ, ಬುಧವಾರ ದಾವಣಗೆರೆಯಲ್ಲಿ ಜವಾಹರ ಲಾಲ್ ಮಂಚ್ ವತಿಯಿಂದ ಪ್ರಧಾನಿಗೆ ಅಂಚೆ ಮೂಲಕ ಕಾಂಗ್ರೆಸ್ ಪ್ರಣಾಳಿಕೆ ರವಾನಿಸಲಾಗಿದೆ.