ಲೋಕಸಭೆ ಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಏ.14 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.
ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟದಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಿಸಲಿದೆ.