ಪ್ರಧಾನಿ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೇಗುಲಗಳಲ್ಲಿ ವಿಶೇಷ ಪೂಜೆ

Sep 20 2025, 01:00 AM IST
ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ದೇಶವನ್ನು ಅಭಿವೃದ್ಧಿಯ ಉತ್ತುಂಗಕ್ಕೆ ಕೊಂಡೊಯ್ಯುತ್ತಿರುವ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ದೇಶದೆಲ್ಲೆಡೆ ಆಚರಿಸಲಾಗುತ್ತಿದೆ. ಅದೇ ರೀತಿ ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿಯೂ ಮೋದಿಯವರ ಹುಟ್ಟಹಬ್ಬವನ್ನು ಬಿಜೆಪಿ ಮತ್ತು ಅವರ ಅಭಿಮಾನಿಗಳು ಆಚರಣೆ ಮಾಡಿದ್ದಾರೆ. ಬಿಜೆಪಿ ಮುಖಂಡ ಸಿ. ಆರ್.ಚಿದಾನಂದ್ ನೂರಾರು ಪಕ್ಷದ ಕಾರ್ಯಕರ್ತರು, ನೇತೃತ್ವದಲ್ಲಿ ಪಟ್ಟಣದ ೪೦ ಅಡಿ ಅಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮೋದಿಯವರ ಹೆಸರಿನಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲಿ ಆಗಮಿಸಿದ ಕಾರ್ಯಕರ್ತರು ಮತ್ತು ಅವರ ಅಭಿಮಾನಿ ಫಲಹಾರ ವಿತರಿಸಲಾಯಿತು.