ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ 3ನೇ ಅವಧಿಗೆ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ ಸ್ವೀಕರಿಸಿದರು ಹಾಗೂ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟದ ನಾಯಕರಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆ ಮಾಡುತ್ತಿರುವ ಬಿಐಎಎಲ್ (ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿ.) ನಿಂದ ಫೇರ್ಫ್ಯಾಕ್ಸ್ ಇಂಡಿಯಾ ಹೋಲ್ಡಿಂಗ್ಸ್ ಸಂಸ್ಥೆ ಮತ್ತೆ ಹೆಚ್ಚುವರಿ ಶೇ.10ರಷ್ಟು ಷೇರು ಖರೀದಿಗೆ ಮುಂದಾಗಿದೆ.
ರಾಜ್ಯದಲ್ಲಿ ಏಡ್ಸ್ ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ. 2014ರಲ್ಲಿ ಒಟ್ಟಾರೆ ತಪಾಸಣೆಯ ಶೇ.1.77ರಷ್ಟು ಇದ್ದ ಸೋಂಕಿನ ಪ್ರಮಾಣ, 2024-25ರಲ್ಲಿ ಶೇ.0.33ಕ್ಕೆ ಇಳಿಕೆಯಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.